ಮಹಾ ಸಂಪುಟ ವಿಸ್ತರಣೆ – 18 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

73
firstsuddi

ಮುಂಬೈ : ಸುಮಾರು ಒಂದೂವರೆ ತಿಂಗಳ ಬಳಿಕ ಶಿಂಧೆ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದೆ. ಶಿವಸೇನೆ ಹಾಗೂ ಬಿಜೆಪಿ ಸರ್ಕಾರದಲ್ಲಿ 50:50ರಷ್ಟು ಸೂತ್ರದಂತೆ ಸಂಪುಟ ವಿಸ್ತರಣೆ ಮಾಡಲಾಗಿದ್ದು, ಶಿವಸೇನೆಯ 9 ಮತ್ತು ಬಿಜೆಪಿಯ 9 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದರು.

ಬಿಜೆಪಿ ನಾಯಕರು
ಚಂದ್ರಕಾಂತ್ ಪಾಟೀಲ್, ಸುಧೀರ್ ಮುಂಗನ್ತಿವಾರ್, ಗಿರೀಶ್ ಮಹಾಜನ್, ಸುರೇಶ್ ಖಾಡೆ, ರಾಧಾಕೃಷ್ಣ ವಿಖೆ ಪಾಟೀಲ್, ರವೀಂದ್ರ ಚೌಹಾಣ್, ಮಂಗಲ್ ಪ್ರಭಾತ್ ಲೋಧಾ, ವಿಜಯಕುಮಾರ್ ಗವಿತ್, ಆತುಲ್ ಸವೆ.

ಶಿವಸೇನಾ ನಾಯಕರು
ದಾದಾ ಭುಸೆ, ಶಂಭುರಾಜ್ ದೇಸಾಯಿ, ಸಂದೀಪನ್ ಭುಮ್ರೆ, ಉದಯ್ ಸಮಂತ್, ತಾನಜಿ ಸಾವಂತ್, ಅಬ್ದುಲ್ ಸತ್ತಾರ್, ದೀಪಕ್ ಕೇಸಾರ್ಕರ್, ಗುಲಬ್ರಾವ್ ಪಾಟೀಲ್, ಸಂಜಯ್ ರಾಥೋಡ್.

ಇನ್ನು ಬಿಜೆಪಿ- ಶಿವಸೇನೆ ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ವಂಚಿತರಾದ ಆಕಾಂಕ್ಷಿಗಳಿಂದ ಅಸಮಾಧಾನದ ಹೊಗೆ ಎದ್ದಿದೆ. ಇದರಿಂದ ಮುನಿಸಿಕೊಂಡಿರುವ ಶಾಸಕರನ್ನು ಮನವೊಲಿಸುವ ಯತ್ನಗಳು ನಡೆಯುತ್ತಿವೆ.