ಉತ್ತರ ಪ್ರದೇಶದ ಪ್ರಯಾಗ್‍ರಾಜ್‍ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಪಾಲ್ಗೊಂಡಿದ್ದಾರೆ. ಪ್ರಯಾಗ್‍ರಾಜ್‍ದ ಸಂಗಮ ಘಾಟ್‍ನ ತ್ರಿವೇಣಿ ಸಂಗಮದ ಪವಿತ್ರ ನೀರಿನಲ್ಲಿ ಪುಣ್ಯಸ್ನಾನ ಮಾಡಿದ್ದರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಧಾನಿ ಮೋದಿಯವರೊಂದಿಗೆ ಹಾಜರಿದ್ದರು. ಜ.13 ರಂದು ಪ್ರಾರಂಭವಾದ ಮಹಾಕುಂಭದಲ್ಲಿ ಇಲ್ಲಿಯವರೆಗೆ 14 ಕೋಟಿಗೂ ಹೆಚ್ಚು ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ. ಇವರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಕಿರಣ್ ರಿಜಿಜು, ಯುಪಿ ಮಾಜಿ ಸಿಎಂ ಅಖಿಲೇಶ್ ಯಾದವ್ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ನಾಯಕರು ಕೂಡ ಪವಿತ್ರ ಸ್ನಾನ ಮಾಡಿದ್ದಾರೆ. ಇದಲ್ಲದೆ ಅನೇಕ ದೇಶಗಳ ಪ್ರತಿನಿಧಿಗಳು ಕೂಡ ಆಗಮಿಸಿದ್ದರು. ಜ.13 ರ ಪೌಷ ಪೂರ್ಣಿಮೆಯಂದು ಪ್ರಾರಂಭವಾದ 2025 ರ ಮಹಾಕುಂಭವು ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮೇಳವಾಗಿದ್ದು, ಪ್ರಪಂಚದಾದ್ಯಂತದ ಭಕ್ತರನ್ನು ಆಕರ್ಷಿಸುತ್ತದೆ. ಫೆಬ್ರವರಿ 26 ರಂದು ಮಹಾಶಿವರಾತ್ರಿಯವರೆಗೆ ಇದು ಮುಂದುವರಿಯುತ್ತದೆ.










