ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್‍ರಾಜ್‍ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಕರ್ನಾಟಕದಿಂದ ತೆರಳಿದ್ದ ಬೆಳಗಾವಿಯ ನಾಲ್ಕು ಮಂದಿ ಮೌನಿ ಅಮವ್ಯಾಸೆ ದಿನದಂದು ಸಂಭವಿಸಿದ ಕಾಲ್ಕುಳಿತದಲ್ಲಿ ಸಿಲುಕಿ ಮೃತಪಟ್ಟಿದ್ದ ಬೆನ್ನಲ್ಲೇ ರಾಜ್ಯ ಸರ್ಕಾರ ಕನ್ನಡಿಗರ ರಕ್ಷಣೆಗೆ ಧಾವಿಸಿದೆ. ಮಹಾಕುಂಭ ಮೇಳಕ್ಕೆ ತೆರಳಿದ್ದು, ಸಂಪರ್ಕಕ್ಕೆ ಸಿಗದ ಯಾತ್ರಿಕರ ರಕ್ಷಣೆಗಾಗಿ ಸಹಾಯವಾಣಿಯನ್ನು ತೆರೆಯಲಾಗಿದೆ. ಸಹಾಯವಾಣಿ ಸಂಖ್ಯೆ 080- 22340676ಗೆ ಸಂಪರ್ಕಿಸಬಹುದು ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ. ಇನ್ನೂ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟಿದ್ದ ನಾಲ್ವರ ಮೃತದೇಹಗಳನ್ನು ಆಂಬ್ಯುಲೆನ್ಸ್ ಮೂಲಕ ದೆಹಲಿಗೆ ರವಾನಿಸಲಾಗಿದ್ದು, ಇಂದು ಮಧ್ಯಾಹ್ನ ದೆಹಲಿಯಿಂದ ಬೆಳಗಾವಿಗೆ ಏರ್ ಲಿಫ್ಟ್ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.










