ಮಹಾಮಳೆಗೆ ಬೆಂಗಳೂರು ತತ್ತರ ; ಇಂದು ಸಿಎಂ ನಗರ ಪ್ರದಕ್ಷಿಣೆ…

56
firstsuddi

ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಮಳೆ ಅಬ್ಬರಿಸುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ಸಿಟಿ ರೌಂಡ್ಸ್ ಮಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮತ್ತೆ ಸಮಗ್ರವಾಗಿ ವೀಕ್ಷಣೆ ಮಾಡಲಿದ್ದಾರೆ. ಬೆಳಗ್ಗೆ 9.50ರಿಂದ ಮಧ್ಯಾಹ್ನ 12.30ರವರೆಗೆ ಸಿಎಂ ನಗರ ಪ್ರದಕ್ಷಿಣೆ ಹಾಕಲಿದ್ದಾರೆ.

ಜೆ.ಸಿ.ನಗರ, ಶಂಕರಮಠ, ಲಗ್ಗೆರೆ, ನಾಗವಾರ, ಎಚ್.ಬಿ.ಆರ್.ಲೇಔಟ್, ಹೆಬ್ಬಾಳ ಸೇರಿದಂತೆ ಮುಂತಾದ ಕಡೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ, ಪರಿಶೀಲನೆ ನಡೆಸಲಿದ್ದಾರೆ. ಜೊತೆಗೆ ಅಪೂರ್ಣ ಕಾಮಗಾರಿಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಿದ್ದಾರೆ. ಮಧ್ಯಾಹ್ನದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಮಾಧ್ಯಮಗೋಷ್ಠಿ ನಡೆಸಿ ಪರಿಹಾರ ಕಾರ್ಯಾಚರಣೆ ಕುರಿತು ಸಮಗ್ರ ಮಾಹಿತಿಯನ್ನು ನೀಡಲಿದ್ದಾರೆ.