ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿ…

137
firstsuddi

ಮಂಗಳೂರು : ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸಕ್ಕೆ ರಾಜ್ಯದಲ್ಲಿ ಮಮತ್ತೊಂದು ಬಲಿಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದ ವ್ಯಕ್ತಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ವ್ಯಕ್ತಿ ಮೃತಪಟ್ಟ ಬಳಿಕ ಅವರ ಗಂಟಲು ದ್ರವವನ್ನು ಕೊರೊನಾ ಪರೀಕ್ಷೆ ನಡೆಸಲು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಮೃತ ವ್ಯಕ್ತಿಯ ಗಂಟಲು ದ್ರವ ಪರೀಕ್ಷೆಯ ವರದಿ ಇಂದು ಬಂದಿದ್ದು, ವರದಿಯಲ್ಲಿ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇದನ್ನು SARI ಪ್ರಕರಣ ಎಂದು ಜಿಲ್ಲಾಡಳಿತ ಪರಿಗಣಿಸಿದೆ.