ಮಹಾಮಾರಿ ಕೊರೊನಾ ಸೋಂಕಿಗೆ ಕೋಲಾರದಲ್ಲಿ ಮೊದಲ ಬಲಿ…

120
firstsuddi

ಕೋಲಾರ : ಮಹಾಮಾರಿ ಕೊರೊನಾ ಸೋಂಕಿಗೆ ಕೋಲಾರ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದ್ದು, 43 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ. ಕೆಜಿಎಫ್ ತಾಲ್ಲೂಕಿನ ತೂಕಲ್ಲು ಗ್ರಾಮದ ಸೋಂಕಿತ ಮಹಿಳೆ ಕಳೆದ ಕೆಲವು ದಿನಗಳ ಹಿಂದೆ ಮದುವೆಗೆಂದು ದೆಹಲಿಯಿಂದ ಗ್ರಾಮಕ್ಕೆ ಬಂದಿದ್ದರು. ಬಳಿಕ ಮಹಿಳೆಗೆ ಕೊರೊನಾ ಲಕ್ಷಣ ಕಂಡುಬಂದ ಹಿನ್ನೆಲೆ ಕೋಲಾರದ ಜಾಲಪ್ಪ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.