ಮಹಾಮಾರಿ ಕೊರೊನಾ ಸೋಂಕಿಗೆ ಬೆಂಗಳೂರಿನಲ್ಲಿ 19 ವರ್ಷದ ಯುವಕ ಬಲಿ…

155
firstsuddi

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಲೇ ಇದ್ದು, ಇಂದು ಬಳ್ಳಾರಿ ಜಿಲ್ಲೆಯಲ್ಲಿ ಒಂದರಲ್ಲೇ ಕೊರೊನಾ ಸೋಂಕಿಗೆ 5 ಮಂದಿ ಬಲಿಯಾಗಿದ್ದಾರೆ. ಅಲ್ಲದೇ ಬೆಂಗಳೂರಿನಲ್ಲಿ ಕೊರೊನಾ ಸೋಂಕಿನಿಂದ 19 ವರ್ಷದ ಯುವಕ ಮೃತಪಟ್ಟಿದ್ದಾನೆ. ಮೃತ ಯುವಕ ಜೂನ್. 27ರಂದು ಕೊರೊನಾ ಸೋಂಕಿನಿಂದ ನಗರದ ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತ ಯುವಕ ಈ ಮೊದಲೇ ನ್ಯುಮೋನಿಯಾದಿಂದ ಬಳಲುತ್ತಿದ್ದು, ಹೀಗಾಗಿ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರೆ, ಇತ್ತ ಮೃತ ಯುವಕನ ಪೋಷಕರು ಎಮರ್ಜೆನ್ಸಿ ಇದ್ದರೂ ಸಾಧಾರಣ ಜ್ವರಕ್ಕೆ ನೀಡುವ ಔಷಧಿಯನ್ನು ನೀಡಿದ್ದಾರೆ. ಹೀಗಾಗಿ ವೈದ್ಯರ ನಿರ್ಲಕ್ಷದಿಂದಲೇ ಯುವಕ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.