ಚಾಮರಾಜನಗರ : ಮಹಾಮಾರಿ ಕೊರೊನಾ ಸೋಂಕಿಗೆ ಮಾಜಿ ಶಾಸಕ ಪಿ. ಗುರುಸ್ವಾಮಿ ಅವರು ಬಲಿಯಾಗಿದ್ದಾರೆ. ಪಿ. ಗುರುಸ್ವಾಮಿ ಅವರಿಗೆ ಕಳೆದ ಕೆಲವು ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿತ್ತು. ಬಳಿಕ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪಿ. ಗುರುಸ್ವಾಮಿ ಅವರು 1999ರಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಆಯ್ಕೆಯಾದ ಏಕೈಕ ಬಿಜೆಪಿ ಬಿಜೆಪಿ ಶಾಸಕರಾಗಿದ್ದರು.










