ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಗೆ ಇಡಿ ಸಮನ್ಸ್…

95
firstsuddi

ಮುಂಬೈ : ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನಲೆ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಗೆ ಇಡಿ ಸಮನ್ಸ್ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದ್ದು, ಇಂದು ವಿಚಾರಣೆಗೆ ಹಾಜರಾಗಬೇಕೆಂದು ಸೂಚನೆ ನೀಡಿದ್ದಾರೆ.

ನಿನ್ನೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ್ ದೇಶ್ ಮುಖ್ ಅವರ ಆಪ್ತ ಸಹಾಯಕ ಕುಂದನ್ ಶಿಂಧೆ ಮತ್ತು ಆಪ್ತ ಕಾರ್ಯದರ್ಶಿ ಸಂಜೀವ್ ಪಾಲಂಡೆ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು. ಅಲ್ಲದೇ ಮುಂಬೈ ಮತ್ತು ನಾಗ್ಪುರದಲ್ಲಿರುವ ಅನಿಲ್ ದೇಶ್ ಮುಖ್ ನಿವಾಸಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದರು.