ಮಹಾರಾಷ್ಟ್ರ : ಲಾಕ್ ಡೌನ್ ಜೂನ್ 15 ರವರೆಗೆ ವಿಸ್ತರಣೆ…

85
firstsuddi

ಮುಂಬೈ : ಕೊರೊನಾ ನಿಯಂತ್ರಿಸಲು ಈಗಾಗಲೇ ಜಾರಿಯಲ್ಲಿರುವ ಲಾಕ್ ಡೌನ್ ಮತ್ತೆ ಜೂನ್ 15 ವರೆಗೆ ವಿಸ್ತರಿಸಲಾಗಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ನಿರ್ಬಂಧಗಳನ್ನು ಸಡಿಲಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಕೊರೊನಾ ಪಾಸಿಟಿವಿಟಿ ರೇಟ್ ಶೇ.10ಕ್ಕಿಂತ ಕಡಿಮೆ ಮತ್ತು ಆಕ್ಸಿಜನ್ ಬೆಡ್ ಗಳು ಶೇಕಡಾ 40ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸಲಿದ್ದು, ಈ ಜಿಲ್ಲೆಗಳಲ್ಲಿ ಅಂಗಡಿಗಳು ಹಾಗೂ ಸಂಸ್ಥೆಗಳು ಬೆಳಗ್ಗೆ 7 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತೆರೆಯಬಹುದು. ಇನ್ನೂ ಶೇ. 20 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಮತ್ತು ಶೇ. 75 ಕ್ಕಿಂತ ಹೆಚ್ಚು ಆಕ್ಸಿಜನ್, ಬೆಡ್ ಗಳನ್ನು ಹೊಂದಿರುವ ಜಿಲ್ಲೆಗಳಿಗೆ ಕೇವಲ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.