ಮುಂಬೈ : ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿರುವ ಬೆನ್ನಲ್ಲೇ ಸಿಎಂ ಉದ್ಧವ್ ಠಾಕ್ರೆ ಮತ್ತು ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇಂದು ಉದ್ಧವ್ ಠಾಕ್ರೆ ಕ್ಯಾಬಿನೆಟ್ ಸಭೆ ನಡೆಸಬೇಕಿತ್ತು. ಆದರೆ ಕೊರೊನಾದಿಂದಾಗಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪುಟ ಸಭೆ ನಡೆಸುತ್ತಾರೆ ಎಂದು ತಿಳಿದುಬಂದಿದೆ.
ಇನ್ನೂ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ಬಗ್ಗೆ ಅವರು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ನನಗೆ ಕೋವಿಡ್ ಪಾಸಿಟಿವ್ ಆಗಿದ್ದು, ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮುಂಬೈನ ಎಚ್ ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದಾರೆ.










