ಮಹಾರಾಷ್ಟ್ರ ಹಾಗೂ ಹರಿಯಾಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ಮತದಾನ

231
firstsuddi

ಮುಂಬೈ : ಇಂದು ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಮಹಾರಾಷ್ಟ್ರದ 288 ಕ್ಷೇತ್ರಗಳಲ್ಲಿ ಬಿಜೆಪಿ-ಶಿವಸೇನೆ ಹಾಗೂ ಎನ್‍ಸಿಪಿ-ಕಾಂಗ್ರೆಸ್ ಮೈತ್ರಿಕೂಟದ ನಡುವೆ ಸ್ಪರ್ಧೆ ಎದುರಾಗಿದ್ದು, ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್ ನೇತೃತ್ವದ ಬಿಜೆಪಿ ಸರ್ಕಾರ ಎರಡನೇ ಬಾರಿಗೆ ಅಧಿಕಾರ ಸ್ವೀಕರಿಸುವ ಭರವಸೆಯಲ್ಲಿದೆ. ನಾಗ್ಪುರ ವಾಯುವ್ಯ ಕ್ಷೇತ್ರದಲ್ಲಿ ಸಿಎಂ ದೇವೇಂದ್ರ ಫಡ್ನಾವೀಸ್, ಭೋಕಾರ್ ಕ್ಷೇತ್ರದಲ್ಲಿ ಮಾಜಿ ಸಿಎಂ ಅಶೋಕ್ ಚವ್ಹಾಣ್ ಹಾಗೂ ಕರಾಡ್ ಕ್ಷೇತ್ರದಲ್ಲಿ ಪೃಥ್ವಿರಾಜ್ ಚವ್ಹಾಣ್ ಸೇರಿದಂತೆ 3,237 ಮಂದಿ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಅಲ್ಲದೇ ಉತ್ತರ ಪ್ರದೇಶದ 11, ಗುಜರಾತ್ ನ6, ಕೇರಳ 5, ಬಿಹಾರ 5, ಪಂಜಾಬ್ 4, ಅಸ್ಸಾಂ 4, ಸಿಕ್ಕಿಂ 3, ತಮಿಳುನಾಡು, ಹಿಮಾಲದ ಪ್ರದೇಶದ ರಾಜಸ್ಥಾನದ 2 ಕ್ಷೇತ್ರಗಳು ಸೇರಿದಂತೆ ಒಟ್ಟು 51 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.