ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ…

47
firstsuddi

ಕಾಪು: ಇಲ್ಲಿನ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯೋರ್ವರು ಪೊಲೀಸ್ ಕ್ವಾಟ್ರಸ್ ನಲ್ಲಿಯೇ ನೇಣಿಗೆ ಶರಣಾದ ಘಟನೆ ಇಂದು ಮುಂಜಾನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಪೊಲೀಸ್ ಸಿಬಂದಿಯನ್ನು ಜ್ಯೋತಿ (29) ಎಂದು ಗುರುತಿಸಲಾಗಿದೆ.
ಮಾಹಿತಿಗಳ ಪ್ರಕಾರ, ಜ್ಯೋತಿ ನಿನ್ನೆ ಎಂದಿನಂತೆ ಕರ್ತವ್ಯ ನಿರ್ವಹಿಸಿದ್ದ ಅವರು ರಾತ್ರಿ ಕ್ವಾಟ್ರಸ್ ಗೆ ಮರಳಿದ್ದು ಇಂದು ಬೆಳಿಗ್ಗೆ ನೇಣಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.

ಮೃತ ಪೊಲೀಸ್ ಸಿಬ್ಬಂದಿಯ ಪತಿ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಯಾಗಿದ್ದು ಪತಿ ಬೆಳಿಗ್ಗೆ ಕರ್ತವ್ಯಕ್ಕೆ ಹೋಗಲೆಂದು ಹೊರಟಿದ್ದು ಈ ವೇಳೆ ಪತ್ನಿ ಜ್ಯೋತಿ ನೇಣಿಗೆ ಕೊರಳೊಡ್ಡಿರುವುದನ್ನು ಗಮನಿಸಿದ್ದರು.

ಕೂಡಲೇ ಪಕ್ಕದಲ್ಲಿರುವ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ಹೋಗಿ ನೋಡಿದಾಗ ಮೃತಪಟ್ಟಿರುವ ವಿಚಾರ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ಧಲಿಂಗಪ್ಪ, ಡಿವೈಎಸ್‍ಪಿ ಅರವಿಂದ ಕಲಗುಜ್ಹಿ, ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.