ಮಹಿಳೆ ಮೇಲೆ ಅತ್ಯಾಚಾರ, ಕಿರುಕುಳ ಆರೋಪ – ಕಾಂಗ್ರೆಸ್ ಶಾಸಕನ ವಿರುದ್ಧ ಎಫ್‍ಐಆರ್…

59
firstsuddi

ಭೋಪಾಲ್ : ಜಬಲ್ ಪುರದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ, ಮಾನಸಿಕ ಕಿರುಕುಳ ನೀಡಿದ ಆರೋಪದಡಿ ಮಧ್ಯಪ್ರದೇಶದ ಧಾರ್ ಜಿಲ್ಲೆಯ ಕುಕ್ಷಿಯ ಕಾಂಗ್ರೆಸ್ ಶಾಸಕ ಉಮಂಗ್ ಸಿಂಘಾರ್ ವಿರುದ್ಧ ಧಾರ್‌ನ ನೌಗಾಂವ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಭಾರತೀಯ ದಂಡ ಸಂಹಿತೆ ಸೆಕ್ಷನ್ 376 (ಅತ್ಯಾಚಾರ), 377 (ಅಸ್ವಾಭಾವಿಕ ಅಪರಾಧಗಳು) ಮತ್ತು 498 (ವಿವಾಹಿತ ಸ್ತ್ರೀಯನ್ನು ಆಪರಾಧಿಕ ಉದ್ದೇಶದಿಂದ ಪುಸಲಾಯಿಸುವುದು ಅಥವಾ ಕರೆದುಕೊಂಡುಹೋಗುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

2019-2020 ರವರೆಗೆ ಉಮಂಗ್ ಸಿಂಘಾರ್ ರಾಜ್ಯದ ಮಾಜಿ ಅರಣ್ಯ ಸಚಿವರಾಗಿದ್ದರು.