ಮಹಿಳೆಯನ್ನ ನಗ್ನಗೊಳಿಸಿ ಮನ ಬಂದಂತೆ ಹಲ್ಲೆ ನಡೆಸಿದ ಕಿರಾತಕರು…

73
firstsuddi

ಯಾದಗಿರಿ : ಮಹಿಳೆಯನ್ನು ನಗ್ನಗೊಳಿಸಿ ಕಬ್ಬಿನ ಜಲ್ಲೆಯಿಂದ ಥಳಿಸಿ, ಅಂಗಾಂಗ ಮುಟ್ಟಿ ಪೈಶಾಚಿಕ ಕೃತ್ಯ ಎಸಗಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ.

ಯಾದಗಿರಿ-ಶಹಾಪುರ ರಾಜ್ಯ ಹೆದ್ದಾರಿ ಮಧ್ಯೆ ಘಟನೆ ನಡೆದಿದೆ ಎನ್ನಲಾಗುತ್ತಿದ್ದು, 5-6 ಜನರ ಗುಂಪಿನಿಂದ ಮಹಿಳೆಯ ಮೇಲೆ ದೌರ್ಜನ್ಯ ನಡೆದಿದ್ದು ಮಹಿಳೆಗೆ ಕಿರುಕುಳ ನೀಡಿರುವ ವಿಡಿಯೋ ವೈರಲ್ ಆಗಿದೆ. ಹಲ್ಲೆಗೊಳಗಾದ ಮಹಿಳೆ ಹನಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

‘ನಿಮ್ಮ ಕಾಲಿಗೆ ಬೀಳ್ತೀನಿ, ನನ್ನ ಬಿಟ್ಟು ಬಿಡಿ’ ಎಂದು ಮಹಿಳೆ ಗೋಳಾಡಿದರೂ 5-6 ಜನರ ಗುಂಪು ಮಹಿಳೆಯ ಮೇಲೆ ಸ್ವಲ್ಪವೂ ಕನಿಕರ ತೋರಿಸದೆ ಆಕೆಯ ಅಂಗಾಂಗಳನ್ನು ಮುಟ್ಟಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ವಾಹನದ ಹೆಡ್ ಲೈಟ್, ಮೊಬೈಲ್ ಟಾರ್ಚ್ ಹಾಕಿ ಹಲ್ಲೆ ನಡೆಸಿದ್ದಾರೆ. ಈ ವೇಳೆ ಅಲ್ಲಿದ್ದ ಯುವಕನೋರ್ವ ನನ್ನಿಂದ 10-15 ಸಾವಿರ ಹಣ ಪಡೆದಿದ್ದಾಳೆ ಅಂತ ಸಿಟ್ಟಿನಿಂದ ಮಹಿಳೆಯನ್ನು ಹೊಡೆಯುವುದು ವಿಡಿಯೋದಲ್ಲಿ ರೆಕಾರ್ಡ್ ಆಗಿದೆ. ಘಟನೆ ಹೊರ ಹಾಕಿದರೆ ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ. ಘಟನೆ ಬಗ್ಗೆ ಇನ್ನೂ ಯಾವುದೇ ದೂರು ದಾಖಲಾಗಿಲ್ಲ.

ಕಳೆದ ಒಂದೂವರೆ ವರ್ಷದ ಹಿಂದಿನ ಘಟನೆ ಎಂದು ವಿಚಾರಣೆಯಲ್ಲಿ ತಿಳಿದು ಬಂದಿದೆ ಎಂದು ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೇದಮೂರ್ತಿ ಹೇಳಿದ್ದಾರೆ. ಅಷ್ಟೇ ಅಲ್ಲ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ಮುಂದುವರೆದಿದೆ ಎಂದು ಎಸ್ಪಿ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಈವರೆಗೆ ಮಹಿಳೆ ದೂರು ನೀಡಿಲ್ಲ. ಆದರೆ ನಾವೇ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದೇವೆ ಎಂದರು.