ಬೆಂಗಳೂರು : ಮಹಿಳೆಯರಿಗೆ ಅಶ್ಲೀಲ ಫೋಟೋ, ವಿಡಿಯೋ ಕಳುಹಿಸಿ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಹರೀಶ್(26) ಬಂಧಿತ ಆರೋಪಿ. ಈತ ಮಹಿಳೆಯೊಬ್ಬರಿಗೆ ವಾಟ್ಸ್ ಆ್ಯಪ್, ಫೇಸ್ ಬುಕ್ ಮೂಲಕ ಅಶ್ಲೀಲ ವಿಡಿಯೋಗಳನ್ನು ಕಳುಹಿಸುತ್ತಿದ್ದನು. ಪದೇ ಪದೆ ವಿಡಿಯೋ ಕರೆ ಮಾಡಿ ಕಿರುಕುಳ ನೀಡುತ್ತಿದ್ದನಂತೆ. ಇದರಿಂದ ಬೇಸತ್ತ ಮಹಿಳೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದರು.
ದೂರಿನ ಆಧಾರದ ಮೇಲೆ ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆರೋಪಿ ನಿತ್ಯ ಹತ್ತಾರು ಮಹಿಳೆಯರಿಗೆ ಅಶ್ಲೀಲ ಫೋಟೋ ಹಾಗೂ ವಿಡಿಯೋ ಕಳುಹಿಸಿ ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ.










