ನವದೆಹಲಿ : ಚುನಾವಣೆಗೆ ಇನ್ನೂ ಕೆಲವೇ ತಿಂಗಳು ಬಾಕಿ ಇರುವಂತಯೇ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಹಿಳೆಯರಿಗೆ ಮಹತ್ತರ ಕೊಡುಗೆಯನ್ನು ಘೋಷಿಸಿದೆ. ನಗರ ಸಾರಿಗೆ ಬಸ್‍ಗಳು ಹಾಗೂ ಮೆಟ್ರೋದಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ಕಲ್ಪಿಸಲಾತ್ತದೆ ಎಂದು ಘೋಷಣೆ ಮಾಡಿದ್ದು, ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕೇಜ್ರಿವಾಲ್ ಅವರು ಮಹಿಳೆಯರಿಗೆ ಸುರಕ್ಷಿತವಾಗಿ ಪ್ರಯಾಣ ಮಾಡುವ ಸಲುವಾಗಿ ಬಸ್‍ಗಳಲ್ಲಿ ಹಾಗೂ ಮೆಟ್ರೋದಲ್ಲಿ ಉಚಿತ ಪ್ರಯಾಣ ಮಾಡುವ ಅವಕಾಶ ನೀಡಲಾಗಿದ್ದು, ಒಂದು ವೇಳೆ ಮಹಿಳೆಯರು ಟಿಕೆಟ್ ಪಡೆದುಕೊಂಡು ಪ್ರಯಾಣ ಮಾಡುವುದಾಗಿ ನಿರ್ಧರಿಸಿದರೆ ಟಿಕೆಟ್ ಪಡೆದು ಪ್ರಯಾಣ ಮಾಡಬಹುದು ಎಂದು ತಿಳಿಸಿದ್ದಾರೆ.










