ಮಹಿಳೆಯರಿಗೆ ವಾಟ್ಸಪ್ ನಲ್ಲಿ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದ ವ್ಯಕ್ತಿಯ ತಲೆ ಬೋಳಿಸಿದ ಗ್ರಾಮಸ್ಥರು…

80
firstsuddi

ಬೆಳಗಾವಿ : ಮಹಿಳೆಯರಿಗೆ ವಾಟ್ಸಪ್ ನಲ್ಲಿ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದ ವ್ಯಕ್ತಿಯ ತಲೆ ಬೋಳಿಸಿ ಪಾಠ ಕಲಿಸಿರುವ ಘಟನೆ ಜಿಲ್ಲೆಯ ಅಥಣಿ ತಾಲ್ಲೂಕಿನ ಮಹೇಶವಾಡಗಿ ಗ್ರಾಮದಲ್ಲಿ ನಡೆದಿದೆ.

ಸುಧಾಕರ್ ಡುಮ್ಮಗೋಳ ಎಂಬಾತನಿಗೆ ಗ್ರಾಮಸ್ಥರೆಲ್ಲರೂ ಸೇರಿ ಧರ್ಮದೇಟು ನೀಡಿ ತಲೆ ಬೋಳಿಸಿ ಬುದ್ಧಿ ಕಲಿಸಿದ್ದಾರೆ. ಈ ಹಿಂದೆಯೇ ಈತನಿಗೆ ಗ್ರಾಮದ ಹಿರಿಯರು ಹಲವಾರು ಬಾರಿ ಬುದ್ಧಿವಾದ ಹೇಳಿದರೂ ಕೂಡ ಹಳೇ ಚಾಳಿಯನ್ನೇ ಮುಂದುವರೆಸಿದ್ದ. ಇದೀಗ ಸುಧಾಕರ್ ನನ್ನು ಹಿಡಿದು ಗ್ರಾಮಸ್ಥರು ತಲೆ ಬೋಳಿಸಿದ್ದಾರೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಅವಮಾನಗೊಂಡ ಸುಧಾಕರ್ ಊರು ಬಿಟ್ಟು ತಲೆ ಮರೆಸಿಕೊಂಡಿದ್ದಾನೆ ಎನ್ನಲಾಗಿದೆ.

ಈ ಘಟನೆ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.