ಮಹಿಳೆಯರಿಗೆ ಸಮಾಜದಲ್ಲಿ ವಿಶೇಷ ಸ್ಥಾನಮಾನವಿದೆ : ಸಚಿವ ಸುಧಾಕರ್.

124
firstsuddi

ಬೆಂಗಳೂರು : ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ. ಮಹಿಳೆಯರಿಗೆ ಸಮಾಜದಲ್ಲಿ ವಿಶೇಷ ಸ್ಥಾನಮಾನವಿದೆ. ಈಗ ಮಹಿಳೆ ಅಬಲೆ ಅಲ್ಲ, ಸಬಲೆ ಆಗಿದ್ದಾಳೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಹೇಳಿದರು.

ನಗರದ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಹ್ಯೂಮನ್ ಮಿಲ್ಕ್ ಬ್ಯಾಂಕ್ ಮತ್ತು ಹೈ ರಿಸ್ಕ್ ಪ್ರೆಗ್ನೆನ್ಸಿ ಕಟ್ಟಡ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ದಿನವೇ ಮಿಲ್ಕ್ ಬ್ಯಾಂಕ್ ಅಮೃತಧಾರೆಗೆ ಚಾಲನೆ ಸಿಕ್ಕಿರುವುದು ಅರ್ಥಪೂರ್ಣ. ಮಕ್ಕಳಿಗೆ ತಾಯಿ ಎದೆಹಾಲು ಅಮೃತದಂತೆ. ಹೀಗಾಗಿ ಇದರಿಂದ ಯಾವ ಮಕ್ಕಳು ವಂಚಿತರಾಗಬಾರದು. ಕೆಲವು ಮಕ್ಕಳು ಹುಟ್ಟುವಾಗಲೇ ತಾಯಿಯನ್ನು ಕಳೆದುಕೊಂಡೋ ಅಥವಾ ನಾನಾ ಕಾರಣಕ್ಕೆ ಶಿಶುಗಳಿಗೆ ಎದೆ ಹಾಲಿನ ಕೊರತೆ ಆಗುತ್ತೆ. ಇದನ್ನು ತಪ್ಪಿಸಲು ಎದೆಹಾಲು ಬ್ಯಾಂಕ್ ಆರಂಭಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದ ಮೈಸೂರು, ಬೆಂಗಳೂರು, ಬೆಳಗಾವಿ ಸೇರಿದಂತೆ ನಾಲ್ಕು ಕಡೆ ಎದೆ ಹಾಲು ಸಂಗ್ರಹಿಸುವ ಕೇಂದ್ರವಿದೆ. ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳಲ್ಲಿ ಸಿಗುವ ವ್ಯವಸ್ಥೆ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಲಭ್ಯವಾಗುತ್ತಿದೆ. ಈ ಮೂಲಕ ಅನೇಕ ಮಕ್ಕಳಿಗೆ ಸಹಾಯವಾಗಲಿದೆ ಎಂದರು.