ಮಹಿಳೆಯಿಂದ 50 ಲಕ್ಷ ರೂ. ವಂಚನೆ – ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‍ವುಡ್‍ ನಿರ್ದೇಶಕ ನಾಗಶೇಖರ್.

92
firstsuddi

ಬೆಂಗಳೂರು : ಸ್ಯಾಂಡಲ್‍ವುಡ್‍ನ ಖ್ಯಾತ ನಿರ್ದೇಶಕ ನಾಗಶೇಖರ್ ಅವರು ಮಹಿಳೆ 50 ಲಕ್ಷ ರೂಪಾಯಿ ವಂಚನೆ ಮಾಡಿದ್ದಾರೆಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಆರ್.ಆರ್.ನಗರದ ಜಯಣ್ಣ ಲೇಔಟ್‌ನಲ್ಲಿ ಮನೆ ಖರೀದಿ ಮಾಡಲು ಮುಂದಾಗಿದ್ದ ನಿರ್ದೇಶಕ ನಾಗಶೇಖರ್, ಅದಕ್ಕಾಗಿ 2 ಕೋಟಿ 70 ಲಕ್ಷ ರೂ.ಗೆ ಮೀನಾ ಎಂಬುವವರ ಬಳಿ ಮಾತುಕತೆ ನಡೆಸಿದ್ದರು. ಕಳೆದ 2020ರ ಆಗಸ್ಟ್ ನಲ್ಲಿ ಮನೆ ಖರೀದಿ ಸಂಬಂಧ ಮೀನಾರ ಜೊತೆ ಸೇಲ್ ಅಗ್ರಿಮೆಂಟ್ ಮಾಡಿಕೊಂಡಿದ್ದ ನಾಗಶೇಖರ್ ಹಂತ ಹಂತವಾಗಿ ಮೀನಾ ಖಾತೆಗೆ 50 ಲಕ್ಷ ವರ್ಗಾಯಿಸಿದ್ದರು.

ಆದರೆ ಈಗ ಮತ್ತೊಬ್ಬರಿಗೆ ಮನೆ ಮಾರಾಟ ಮಾಡಲಾಗಿದೆ. ಅಲ್ಲದೇ ಸೇಲ್ ಅಗ್ರಿಮೆಂಟ್ ಬಳಿಕ ಪಡೆದಿದ್ದ 50 ಲಕ್ಷ ರೂ ಹಣವನ್ನು ಹಿಂದಿರುಗಿಸದೇ ಮೀನಾ ಸತಾಯಿಸಿದ ಕಾರಣ ದುಡ್ಡು, ಮನೆ ಎರಡೂ ಇಲ್ಲದೇ ಕಂಗಾಲಾಗಿರುವ ನಿರ್ದೇಶಕ, ಮೀನಾ ಹಾಗೂ ರಾಜ್ ಕುಮಾರ್ ವಿರುದ್ಧ ಆರ್.ಆರ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಸೆಕ್ಷನ್ 420ರಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.