ಮಾ.25ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಯೋಗಿ ಆದಿತ್ಯನಾಥ್.

85
firstsuddi

ಲಖನೌ: ಯೋಗಿ ಆದಿತ್ಯನಾಥ್ ಅವರು ಮಾರ್ಚ್ 25ರಂದು ಎರಡನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಪ್ರಮಾಣ ವಚನ ಸಮಾರಂಭವೂ ಮಾರ್ಚ್ 25ರಂದು ಸಂಜೆ 4 ಗಂಟೆಗೆ ಲಖನೌದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾಗವಹಿಸಲಿದ್ದಾರೆ. ಅಲ್ಲದೇ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪ್ರತಿಪಕ್ಷಗಳು ಸೇರಿದಂತೆ ಇತರ ಪ್ರಮುಖ ನಾಯಕರು ಕಾರ್ಯಕ್ರಮಕ್ಕೆ ಹಾಜರಾಗುವ ನಿರೀಕ್ಷೆಯಿದೆ.

ಲಖನೌದ ಏಕನಾ ಸ್ಟೇಡಿಯಂನಲ್ಲಿ ಅದ್ಧೂರಿ ಸಮಾರಂಭಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಬಿಜೆಪಿ ಈಗಾಗಲೇ ಸಂಪುಟ ಸದಸ್ಯರ ಹೆಸರನ್ನು ಅಂತಿಮಗೊಳಿಸಿದೆ. ಉತ್ತರಪ್ರದೇಶದಲ್ಲಿ ಬಿಜೆಪಿ 403 ಕ್ಷೇತ್ರಗಳ ಪೈಕಿ 255 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಅಧಿಕಾರವನ್ನು ಉಳಿಸಿಕೊಂಡಿದೆ.