ಮಾಂಡಸ್ ಚಂಡಮಾರುತ – ತಮಿಳುನಾಡು, ಆಂಧ್ರದಲ್ಲಿ ಭಾರೀ ಮಳೆಯ ಎಚ್ಚರಿಕೆ…

54
firstsuddi

ನವದೆಹಲಿ : ನೈಋತ್ಯ ಹಾಗೂ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಮಾಂಡಸ್ ಚಂಡಮಾರುತ ಉಂಟಾಗಿರುವುದರಿಂದ ಇಂದು ಉತ್ತರ ತಮಿಳುನಾಡು, ಪುದುಚೇರಿ ಹಾಗೂ ದಕ್ಷಿಣ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿದೆ.

ಮಾಂಡಸ್ ಚಂಡಮಾರುತದಿಂದಾಗಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ನ ಕೆಲವು ಸ್ಥಳಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಡಿ.9ರಂದು ಚೆನ್ನೈ, ಕಲ್ಲಕುರಿಚಿ, ಅರಿಯಲೂರ್, ಕಡಲೂರು, ವಿಲ್ಲುಪುರಂ, ಚೆಂಗಲ್ಪಟ್ಟು, ಕಾಂಚೀಪುರಂ, ತಿರುವಳ್ಳೂರು, ಪೆರಂಬಲೂರು, ಮೈಲಾಡುತುರೈ, ತಂಜೂರು, ತಿರುವರೂರು, ನಾಗಪಟ್ಟಣಂ ಜಿಲ್ಲೆಗಳು ಮತ್ತು ಕಾರೈಕಲ್ ನ ಕೆಲ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕರಾವಳಿ ಆಂಧ್ರಪ್ರದೇಶ ಮತ್ತು ರಾಯಲಸೀಮಾದ ಪಕ್ಕದ ಪ್ರದೇಶಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಡಿಸೆಂಬರ್ 10ರವರೆಗೆ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದಲ್ಲಿ ಚಂಡಮಾರುತ ಬೀಸುವ ಮುನ್ಸೂಚನೆ ಇದೆ.