ಮಾಂಸ ತಿಂದು ದೇವಾಲಯಕ್ಕೆ ಹೋಗಿಲ್ಲ : ಸಿ.ಟಿ.ರವಿ ಸ್ಪಷ್ಟನೆ…

52
firstsuddi

ಮಂಡ್ಯ : ಕಾರವಾರದಲ್ಲಿ ಮಾಂಸದೂಟ ತಿಂದು ದೇವಸ್ಥಾನಕ್ಕೆ ಹೋದ ವಿವಾದ ಕುರಿತು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಅವರು ಮಂಡ್ಯದಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಭಟ್ಕಳಕ್ಕೆ ಹೋದಾಗ ನಾಗಬನ ನೋಡಲು ಕರೆದಿದ್ದರು. ಹೊಸದಾಗಿ ದೇವಾಲಯ ಕಟ್ಟಲಾಗಿತ್ತು. 45 ದಿನಗಳು ಓಪನ್ ಇರಲಿಲ್ಲ. ನಾಗಬನದ ಹೊರಾವರಣದಲ್ಲಿ ನಿಂತು ದರ್ಶನ ಪಡೆದಿದ್ದೇವೆ. ದೇವಾಲಯಕ್ಕೆ ನಾನ್ ವೆಜ್ ತಿಂದು ಹೋಗಿಲ್ಲ. ನಾನು ಹುಟ್ಟಿರೋದೆ ಮಾಂಸ ತಿನ್ನೋ ಜಾತಿಯಲ್ಲಿ. ಆದರೆ ಮಾಂಸ ತಿಂದು ದೇವಾಲಯಕ್ಕೆ ಹೋಗಿಲ್ಲ. ಸುಮ್ಮನೆ ವಿವಾದ ಹುಟ್ಟಹಾಕಲು ಕೆಲವರು ಹೀಗೆ ಮಾಡುತ್ತಿದ್ದಾರೆ ಎಂದು ಹೇಳಿದರು.

ವ್ರತ ಪೂಜೆಗಳನ್ನು ಆಚರಿಸುವವನು ನಾನು, ನನಗೆ ದೇವರ ಬಗ್ಗೆ ಶ್ರದ್ಧೆ ಇದೆ. ಮಾಂಸ ತಿನ್ನುತ್ತೇನೆ ಹಾಗಂತ ತಿಂದು ದಾಸ್ಟ್ಯ ತೋರಿಸಲ್ಲ. ಮಾಂಸ ತಿಂದು ದೇವಾಲಯಕ್ಕೆ ಹೋಗ್ತೀನಿ ಏನಿವಾಗ, ಯಾರು ಏನ್ ಮಾಡ್ತಾರೆ ಅಂತ ಸಿದ್ದು ರೀತಿ ಹೇಳಲ್ಲ ಎಂದರು.