ನವದೆಹಲಿ : ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ದಿಲೀಪ್ ಕುಮಾರ್ ಗಾಂಧಿ ಅವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಕೋವಿಡ್-19 ಪಾಸಿಟಿವ್ ಕಂಡು ಬಂದ ಕಾರಣ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗೆ ದಿಲೀಪ್ ಗಾಂಧಿ ಅವರು ಅಸುನೀಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.
ಅಹ್ಮದ್ ನಗರ ದಕ್ಷಿಣ ಲೋಕಸಭಾ ಕ್ಷೇತ್ರದಿಂದ ದಿಲೀಪ್ ಕುಮಾರ್ ಅವರು ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.










