ಮಾಜಿ ಕೇಂದ್ರ ಸಚಿವ ಪಿ.ರಂಗರಾಜನ್ ಪತ್ನಿಯ ಬರ್ಬರ ಹತ್ಯೆ…

101
firstsuddi

ನವದೆಹಲಿ : ದಿವಂಗತ ಮಾಜಿ ಕೇಂದ್ರ ಸಚಿವ ಪಿ.ರಂಗರಾಜನ್ ಕುಮಾರಮಂಗಲಂ ಅವರ ಪತ್ನಿ ಕಿಟ್ಟಿ ಕುಮಾರಮಂಗಲಂ(67) ಅವರನ್ನು ಕಳೆದ ರಾತ್ರಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ನಿನ್ನೆ ರಾತ್ರಿ ಕಿಟ್ಟಿ ಅವರು ದಕ್ಷಿಣ ದೆಹಲಿಯ ವಸಂತ ವಿಹಾರ್ ನಲ್ಲಿರುವ ತಮ್ಮ ನಿವಾಸದಲ್ಲಿ ಕೊಲೆಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಓರ್ವನನ್ನು ಬಂಧಿಸಿದ್ದು, ಇತರ ಇಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ನೈರುತ್ಯ ವಲಯ ಡಿಸಿಪಿ ಮಾಹಿತಿ ನೀಡಿದ್ದಾರೆ. ಕಿಟ್ಟಿ ಕುಮಾರಮಂಗಲಂ ಅವರ ಕೊಲೆಗೆ ಕಾರಣ ತಿಳಿದುಬಂದಿಲ್ಲ.