ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣ.

30

ನವದೆಹಲಿ: ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಭೂಮಿ ನೀಡಲು ಒಪ್ಪಿಗೆ ನೀಡಿದೆ. ಕಾಂಗ್ರೆಸ್ ಮುಖ್ಯಸ್ಥರಿಂದ ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕಾಗಿ ಜಾಗವನ್ನು ಮಂಜೂರು ಮಾಡುವಂತೆ ಮನವಿ ಮಾಡಲಾಗಿದ್ದು, ಈ ಮನವಿಯನ್ನು ಸ್ವೀಕರಿಸಲಾಗಿದೆ. ಸಚಿವ ಸಂಪುಟ ಸಭೆಯ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸ್ಮಾರಕ ನಿರ್ಮಾಣಕ್ಕಾಗಿ ಜಾಗವನ್ನು ಮಂಜೂರು ಮಾಡಲಿದ್ದಾರೆಂದು ಎಂದು ಮಾಹಿತಿ ತಿಳಿದುಬಂದಿದೆ. ಸ್ಮಾರಕಕ್ಕಾಗಿ ಟ್ರಸ್ಟ್ ರಚನೆ ಮತ್ತು ಜಾಗದ ಹಂಚಿಕೆಯನ್ನು ಅಂತಿಮಗೊಳಿಸಿರುವುದರಿಂದ, ಅಂತ್ಯಕ್ರಿಯೆ ಮತ್ತು ಔಪಚಾರಿಕತೆಗಳು ಈ ಮಧ್ಯೆ ಮುಂದುವರಿಯಬಹುದು ಎಂದು ಗೃಹ ಸಚಿವಾಲಯ ತಿಳಿಸಿದೆ. ಕಾಂಗ್ರೆಸ್ ಕಚೇರಿಯಿಂದ ಅಂತಿಮ ಯಾತ್ರೆ ಆರಂಭವಾಗಿದ್ದು, ಜಾಗತಿಕ ಭಾರತದ ಶಿಲ್ಪಿಗೆ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಗಣ್ಯರಿಂದ ಅಂತಿಮ ನಮ£ ಸಲ್ಲಿಸÀಲಾಯಿತು. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ನೇತೃತ್ವ ವಹಿಸಿ, ಆರ್ಥಿಕ ಸುಧಾರಣೆಗಳ ಹರಿಕಾರ ಎಂದು ಗುರುತಿಸಿಕೊಂಡಿರುವ ಡಾ. ಮನಮೋಹನ್ ಸಿಂಗ್ ಅವರು  92 ನೇ ವಯಸ್ಸಿನಲ್ಲಿ ಗುರುವಾರ ನಿಧನರಾಗಿದ್ದಾರೆ. 2004 ರಿಂದ 2014ರ ವರೆಗೆ 10 ವರ್ಷಗಳ ಕಾಲ ಭಾರತದ ಪ್ರಧಾನಿಯಾಗಿ ಸಿಂಗ್ ಅವರು ಗಣನೀಯ ಸೇವೆ ಸಲ್ಲಿಸಿದ್ದರು. ಅವರ ಅಂತ್ಯಕ್ರಿಯೆಯನ್ನು ಪ್ರತ್ಯೇಕ ಸ್ಮಾರಕ ಸ್ಥಳದಲ್ಲಿ ನಡೆಸಬೇಕೆಂಬ ಕಾಂಗ್ರೆಸ್‍ನ ಮನವಿಯನ್ನು ಕೇಂದ್ರ ಸರ್ಕಾರ ಆರಂಭದಲ್ಲಿ ನಿರಾಕರಿಸಲಾಗಿತ್ತು. ಕೇಂದ್ರದ ನಿರ್ಧಾರಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಭಾರತದ ಮೊದಲ ಸಿಖ್ ಪ್ರಧಾನಿಗೆ ಉದ್ದೇಶಪೂರ್ವಕ ಅವಮಾನ ಎಂದು ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.