ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಕೊರೊನಾ ಪಾಸಿಟಿವ್…

183
firstsuddi

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಮದುವರೆಯುತ್ತಲೇ ಇದ್ದು, ನಿನ್ನೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೊನಾ ದೃಢಪಟ್ಟ ಬೆನ್ನಲ್ಲೇ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಕುರಿತು ಸ್ವತಃ ಸಿದ್ದರಾಮಯ್ಯ ಅವರೇ ತಮ್ಮ ಟ್ವಿಟರ್ ಖಾತೆಯ ಮೂಲಕ ಸ್ಪಷ್ಟಪಡಿಸಿದ್ದಾರೆ. ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ಮನವಿ ಮಾಡಿದ್ದಾರೆ.