ಮಾಜಿ ಶಾಸಕ ಎನ್​ ಟಿ ಬೊಮ್ಮಣ್ಣ ನಿಧನ – ಇಂದು ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ…

44
firstsuddi

ವಿಜಯನಗರ: ಜಿಲ್ಲೆಯ ಕೂಡ್ಲಿಗಿ ಕ್ಷೇತ್ರದ ಮಾಜಿ ಶಾಸಕ ಎನ್ ಟಿ ಬೊಮ್ಮಣ್ಣ(79) ಅವರು ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎನ್ ಟಿ ಬೊಮ್ಮಣ್ಣ ಒಂದು ತಿಂಗಳ ಹಿಂದೆ ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ನಿನ್ನೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇಂದು ಕೂಡ್ಲಿಗಿ ತಾಲೂಕಿನ ಸ್ವಗ್ರಾಮದ ನರಸಿಂಹ ಗಿರಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಎನ್ ಟಿ ಬೊಮ್ಮಣ್ಣ ಕೂಡ್ಲಿಗಿ ಕ್ಷೇತ್ರದಿಂದ ಸ್ಪರ್ಧಿಸಿ ಎರಡು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದರು. ಎನ್ ಟಿ ಬೊಮ್ಮಣ್ಣ ಅವರು ಪತ್ನಿ ಸೇರಿದಂತೆ ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ.