ಮಾಜಿ ಸಚಿವ ಆರ್.ರೋಷನ್ ಬೇಗ್ ನಿವಾಸದ ಮೇಲೆ ಇಡಿ ದಾಳಿ…

80
firstsuddi

ಬೆಂಗಳೂರು : ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ದಾಳಿ ಬೆನ್ನಲ್ಲೇ ಮಾಜಿ ಸಚಿವ ಆರ್.ರೋಷನ್ ಬೇಗ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಶಿವಾಜಿನಗರದ ರೋಷನ್ ಬೇಗ್ ಮನೆ ಸೇರಿದಂತೆ ಆರು ಕಡೆಗಳಲ್ಲಿ ಏಕಕಾಲದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಡಿ ಅಧಿಕಾರಿಗಳು ಸಿಆರ್ ಪಿಎಫ್ ಭದ್ರತೆ ನೇತೃತ್ವದಲ್ಲಿ ದಾಳಿ ಮಾಡಿದ್ದಾರೆ ಎನ್ನಲಾಗಿದೆ.

ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಗ್ ಆಸ್ತಿ ಜಪ್ತಿಗೆ ಹೈಕೋರ್ಟ್ ಆದೇಶ ನೀಡಿತ್ತು. 16.81 ಕೋಟಿ ರೂ ಆಸ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳು ಆಸ್ತಿ ಮೌಲ್ಯದ ವರದಿಯನ್ನು ಇಡಿ ಅಧಿಕಾರಿಗಳಿಗೆ ಕಳುಹಿಸಿತ್ತು. ಈ ವರದಿ ಆಧರಿಸಿ ಇಡಿ ಅಧಿಕಾರಿಗಳು ಇಂದು ರೋಷನ್ ಬೇಗ್ ಮನೆಗೆ ತೆರಳಿ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.