ದಾವಣಗೆರೆ : ಮಾಜಿ ಸಚಿವ ಯು.ಟಿ.ಖಾದರ್ ಅವರು ಪ್ರಯಾಣಿಸುತ್ತಿದ್ದ ಕಾರು ಜಿಲ್ಲೆಯ ಅನುಗೋಡು ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ. ಬೆಂಗಳೂರಿನಿಂದ ಬರುತ್ತಿದ್ದ ವೇಳೆ ಖಾದರ್ ಅವರ ಕಾರು ಮುಂದೆ ಹೋಗುತ್ತಿದ್ದ ಕಂಟೈನರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಮುಂಭಾಗದ ಬಾನೆಟ್ ನಜ್ಜುಗುಜ್ಜಾಗಿದೆ.
ಮಾಜಿ ಸಚಿವ ಯು.ಟಿ.ಖಾದರ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಕಾರ್ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಎಸ್ ಪಿ ಹನುಮಂತರಾಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ ಲೋಕಸಭೆ ಉಪಚುನಾವಣೆ ಪ್ರಚಾರಕ್ಕೆ ತೆರಳುತ್ತಿದ್ದ ಯು.ಟಿ. ಖಾದರ್ ಅವರು ಅಪಘಾತದ ಬಳಿಕ ಮತ್ತೊಂದು ವಾಹನದ ಮೂಲಕ ಬೆಂಗಳೂರಿಗೆ ಹಿಂತಿರುಗಿದ್ದಾರೆ.