ಮಾಜಿ ಸಚಿವ ರೇವಣ್ಣ ಅವರಿಗೂ ಕೊರೊನಾ ಆತಂಕ-ಬೆಂಗಾವಲಿನ ನಾಲ್ವರು ಸಿಬ್ಬಂಧಿಗೆ ಸೋಂಕು ದೃಢ…

163
firstsuddi

ಹಾಸನ : ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೂ ಕೊರೊನಾ ಆತಂಕ ಶುರುವಾಗಿದ್ದು, ರೇವಣ್ಣ ಅವರ ಬೆಂಗಾವಲು ವಾಹನದಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಡವಾಗಿದೆ. ಬೆಂಗಳೂರಿನಲ್ಲಿರುವ ಮೂವರು ಹಾಗೂ ಹಾಸನದಲ್ಲಿರುವ ಓರ್ವೃ ಸಿಬ್ಬಂಧಿಗೆ ಕೊರೊನಾ ಸೋಂಕು ಪಾಸಿಟಿವ್ ಬಂದಿದ್ದು, ಹೀಗಾಗಿ ರೇವಣ್ಣ ಅವರಿಗೆ ಕೊರೊನಾ ಆತಂಕ ಹೆಚ್ಚಾಗಿದೆ. ರೇವಣ್ಣ ಅವರ ಇಬ್ಬರು ಆಪ್ತ ಸಹಾಯಕರು ಸೇರಿ ಒಟ್ಟು 9 ಮಂದಿಗೆ ಕೊರೊನಾ ಪರೀಕ್ಷೆ ಮಾಡಿಸಲಾಗಿದ್ದು, ಈ ಪೈಕಿ ನಾಲ್ವರಿಗೆ ಕೊರೊನಾ ಸೋಂಕು ತಗುಲಿರುವುದು ದೃಡವಾಗಿದ್ದು, ಇಂದು ರೇವಣ್ಣ ಅವರಿಗೂ ಕೊರೊನಾ ಪರೀಕ್ಷೆ ನಡೆಸುವ ಸಾಧ್ಯತೆ ಇದೆ.