ಮಾಜಿ ಸಚಿವ ವಿರುಪಾಕ್ಷಪ್ಪ ಅಗಡಿ ವಿಧಿವಶ…

74
firstsuddi

ಕೊಪ್ಪಳ : ವಯೋಸಹಜ ಖಾಯಿಲೆಯಿಂದ ಕಳೆದ ಒಂದು ತಿಂಗಳಿನಿಂದ ಬಳಲುತ್ತಿದ್ದ ಮಾಜಿ ಸಚಿವ ವಿರುಪಾಕ್ಷಪ್ಪ ಅಗಡಿ (81) ಇಂದು ಕಲ್ಯಾಣ ನಗರದ ಮನೆಯಲ್ಲಿ ನಿಧನರಾಗಿದ್ದಾರೆ.

ವಿರುಪಾಕ್ಷಪ್ಪ ಅಗಡಿ ಅವರು ಮೂವರು ಮಕ್ಕಳನ್ನು ಅಗಲಿದ್ದಾರೆ. ಸಂಜೆ 4 ಗಂಟೆಗೆ ಕೊಪ್ಪಳದ ವೀರಶೈವ ರುಧ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಕಲ್ಯಾಣನಗರದ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

1985-1989 ರವರೆಗೆ ಜನತಾ ಪಕ್ಷದಿಂದ ಶಾಸಕರಾಗಿದ್ದ ವಿರುಪಾಕ್ಷಪ್ಪ ಅಗಡಿ ಅವರು ಎಸ್.ಆರ್. ಬೊಮ್ಮಾಯಿ ಸಂಪುಟದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದರು. ಕೇವಲ ಒಂದು ವಾರ ಸಚಿವರಾಗಿದ್ದ ಅಗಡಿ, 1989 ರಲ್ಲಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಸೋತಿದ್ದರು‌. 1998ರಲ್ಲಿ ಲೋಕಶಕ್ತಿ ಪಕ್ಷದಿಂದ, 2004 ರಲ್ಲಿ ಜೆಡಿಎಸ್​​ನಿಂದ ಲೋಕಸಭೆಗೆ ಸ್ಪರ್ಧಿಸಿದ್ದರು.