ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಮತ್ತೊಂದು ಸಂಕಷ್ಟ: ಅರಣ್ಯ ಭೂಮಿ ಒತ್ತುವರಿ ಆರೋಪ.

47

ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಮೇಶ್ ಕುಮಾರ್ ವಿರುದ್ಧ 64 ಎಕರೆ ಅರಣ್ಯ ಭೂಮಿ ಒತ್ತುವರಿ ಆರೋಪ ಕೇಳಿಬಂದಿದೆ. ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಸಹುಡ್ಯ ಗ್ರಾಮದ ಬಳಿ ಅರಣ್ಯ ಭೂಮಿ ಒತ್ತುವರಿ ಮಾಡಿರುವ ಆರೋಪ ಕೇಳಿಬಂದಿದೆ. ನವೆಂಬರ್ 6 ರಂದು ಅರಣ್ಯ ಇಲಾಖೆ & ಕಂದಾಯ ಇಲಾಖೆ ಜಂಟಿ ಸರ್ವೆಗೆ ದಿನಾಂಕ ನಿಗದಿ ಮಾಡಲಾಗಿತ್ತು. ಹೊಸಹುಡ್ಯ ಸರ್ವೆ ನಂ.1 ಮತ್ತು 2ರಲ್ಲಿನ 122 ಎಕರೆ ಭೂಮಿಯನ್ನು ಒತ್ತುವರಿ ಮಾಡಿರುವ ಏಳು ಜನನ ಪೈಕಿ ರಮೇಶ್ ಕುಮಾರ್ ಸಹ ಒಬ್ಬರಾಗಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಸಹುಡ್ಯ ಗ್ರಾಮದ ಬಳಿ ಅರಣ್ಯ ವಲಯದ ಜಿನಗಲಕುಂಟೆ ಗ್ರಾಮದಲ್ಲಿ 64 ಎಕರೆ ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಲಾಗಿದೆ. ಸಮೀಕ್ಷೆ ಸಂಖ್ಯೆಯ ಅಡಿಯಲ್ಲಿ ಭೂಮಿಯ ಮೇಲೆ ಜಂಟಿ ಸಮೀಕ್ಷೆಯನ್ನು ನಡೆಸಬೇಕು. ಒತ್ತುವರಿ ಕಂಡುಬಂದಲ್ಲಿ, ಅದನ್ನು ತೆರವುಗೊಳಿಸಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ರಾಜ್ಯ ಅರಣ್ಯ ಇಲಾಖೆಯ ಸಂರಕ್ಷಣಾಧಿಕಾರಿ ಶಿವಶಂಕರ್ ಸೆಂಗುಟ್ಟಿವೇಲ್ ಇತ್ತೀಚೆಗೆ ಪತ್ರ ಬರೆದಿದ್ದು, ಈ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚಿಸಿದ್ದಾರೆ.