ಮಾಡಾಳ್ ವಿರೂಪಾಕ್ಷಪ್ಪ ಮಿಸ್ಸಿಂಗ್ – ಕಾಂಗ್ರೆಸ್ ಪೋಸ್ಟರ್ ಅಭಿಯಾನ…

54
firstsuddi

ಬೆಂಗಳೂರು : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪೋಸ್ಟರ್ ಅಭಿಯಾನ ನಡೆಸಿದ್ದಾರೆ.

ರಾಜ್ಯದ ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಪೋಸ್ಟರ್ ಅಂಟಿಸಿ ವಿರೂಪಾಕ್ಷಪ್ಪ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಎ1 ಆರೋಪಿ ಮಿಸ್ಸಿಂಗ್. ಕಂಡಲ್ಲಿ 100 ನಂಬರ್ ಗೆ ಕರೆ ಮಾಡಿ. ಲೋಕಾಯುಕ್ತ ತನಿಖೆಗೆ ಸಹಾಯ ಮಾಡಿ. ವಯಸ್ಸು, ಎತ್ತರ, ಸ್ಥಳ ಬಗ್ಗೆ ಪೋಸ್ಟರ್ ನಲ್ಲಿ ನಮೂದಿಸಿ ವ್ಯಂಗ್ಯ ಮಾಡಿದ್ದಾರೆ.

ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ 40 ಲಕ್ಷ ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಪ್ರಶಾಂತ್ ನನ್ನು ಬಂಧಿಸಿದ ಬೆನ್ನಲ್ಲೇ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿ ಸುಮಾರು 8 ಕೋಟಿ ಹಣವನ್ನು ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣದಲ್ಲಿ ಶಾಸಕ ವಿರೂಪಾಕ್ಷಪ್ಪ ಎ1 ಆರೋಪಿಯಾಗಿದ್ದಾರೆ.

ಇನ್ನು ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆಗೆ (ಕೆಎಸ್‌ಡಿಎಲ್‌) ಕಚ್ಚಾ ಸಾಮಗ್ರಿ ಪೂರೈಸುವ ಗುತ್ತಿಗೆಯ ಕಾರ್ಯಾದೇಶ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣದಲ್ಲಿ ಆರೋಪಿಗಳಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಅವರ ಪುತ್ರ ಬೆಂಗಳೂರು ಜಲ ಮಂಡಳಿಯಲ್ಲಿ ಮುಖ್ಯ ಲೆಕ್ಕಾಧಿಕಾರಿ ಎಂ.ವಿ ಪ್ರಶಾಂತ್ ಕುಮಾರ್ ಅವರ ವಿರುದ್ಧ ಯಾವುದೇ ತರಹದ ಮಾನಹಾನಿ ಸುದ್ದಿ ಪ್ರಕಟಿಸದಂತೆ ಬೆಂಗಳೂರಿನ ಸತ್ರ ನ್ಯಾಯಾಲಯವು ನಿನ್ನೆ ಮಾಧ್ಯಮಗಳ ವಿರುದ್ಧ ಏಕಪಕ್ಷೀಯ ತಾತ್ಕಾಲಿಕ ಪ್ರತಿಬಂಧಕಾದೇಶ ಮಾಡಿದೆ.