ಮಾಡಾಳ್ ವಿರೂಪಾಕ್ಷಪ್ಪಗೆ ಏಪ್ರಿಲ್ 11ರ ವರೆಗೆ ನ್ಯಾಯಾಂಗ ಬಂಧನ…

40
firstsuddi

ಬೆಂಗಳೂರು : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಪ್ರಿಲ್ 11ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.

ಲಂಚ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪರನ್ನ ಬಂಧಿಸಿದ ನಂತರ ಲೋಕಾಯುಕ್ತ ಪೊಲೀಸರು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದಿದ್ದರು. ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಈ ವೇಳೆ ಮಾಡಾಳ್ ಪರ ವಕೀಲರು ಅವರಿಗೆ ಮನೆಯ ಊಟವನ್ನೇ ಒದಗಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ಅನುಮತಿ ನೀಡದ ಕೋರ್ಟ್ ಜೈಲಿನ ಪ್ರಕಾರವೇ ಊಟ ನೀಡುವಂತೆ ಸೂಚಿಸಿದೆ. ಅಲ್ಲದೇ ಏಪ್ರಿಲ್ 6ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ್ದು, ಅದೇ ದಿನ ಆಕ್ಷೇಪಣೆ ಅರ್ಜಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿದೆ.