ಬೆಂಗಳೂರು : ಮಾನವ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಆರೋಪದ ಅಡಿಯಲ್ಲಿ ಸಿಸಿಬಿ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಸವರಾಜು ಶಂಕರಪ್ಪ ಕಳಸದ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದ್ದು, ಈ ವ್ಯಕ್ತಿ ಕೆಲಸ ಕೊಡಿಸುವುದಗಿ ನಂಬಿಸಿ ಬೇರೆ ರಾಜ್ಯದ ಯುವತಿಯರನ್ನು ಕರೆತಂದು ಡ್ಯಾನ್ಸ್ ಬಾರ್‍ಗಳಿಗೆ ಸರಬರಾಜು ಮಾಡುತ್ತಿದ್ದರು. ಅಲ್ಲದೇ ಯುವತಿಯರನ್ನು ಯುಎಇ ಹಾಗೂ ಫ್ಯುಜಾರಿಯಾಗಳಿಗೆ ಅಕ್ರಮ ಸಾಗಾಣಿಕೆ ಮಾಡಿದ್ದರು. ಈ ಕುರಿತು ವಿಷಯ ತಿಳಿಯುತ್ತಿದ್ದಂತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, 9 ಮಂದಿ ಯುವತಿಯರನ್ನು ರಕ್ಷಿಸಿದ್ದಾರೆ.










