ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಯ ಹತ್ಯೆ…

285
firstsuddi

ಮಂಡ್ಯ : ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಯನ್ನು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕಿನ ರಾಯಸಮುದ್ರ ಗ್ರಾಮದಲ್ಲಿ ನಡೆದಿದೆ. ಗುಂಡಪ್ಪ(45), ಲಲಿತಮ್ಮ(40) ಹತ್ಯೆಯಾದ ದಂಪತಿ. ಕಳೆದ ನಾಲ್ಕೈದು ದಿನಗಳಿಂದ ದಂಪತಿಯ ಮನೆಗೆ ಬೀಗ ಹಾಕಲಾಗಿದ್ದು, ಇದರಿಂದ ಅನುಮಾನಗೊಂಡ ಗ್ರಾಮಸ್ಥರು ಕಿಟಕಿಯಲ್ಲಿ ನೋಡಿದಾಗ ಇಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಕಂಡು ಬಂದಿದ್ದು, ಬಳಿಕ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿಯನ್ನು ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ 6ದಿನದ ಹಿಂದೆ ದುಷ್ಕರ್ಮಿಗಳು ದಂಪತಿಯನ್ನು ಕೊಲೆ ಮಾಡಿ ಮನೆಗೆ ಬೀಗ ಹಾಕಿಕೊಂಡು ಹೋಗಿರಬಹುದು ಎಂಬ ಶಂಕೆ ವ್ಯಕ್ತಪಡಿಸಿದ್ದು, ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಿ ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದು, ಕೆ.ಆರ್. ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.