ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ…

71
firstsuddi

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​ನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಗರದ ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ರಾತ್ರಿ 9.30ರ ಸುಮಾರಿಗೆ ನಡೆದಿದೆ.

ಕೋಣನಕುಂಟೆ ಠಾಣಾ ವ್ಯಾಪ್ತಿಯ ಸಹದೇವ್ ಮೃತ ರೌಡಿಶೀಟರ್. ಟೀ ಕುಡಿಯಲು ಬೇಕರಿ ಬಳಿ ಬಂದಿದ್ದಾಗ ಮೂರು ಬೈಕ್​ಗಳಲ್ಲಿ ಬಂದಿದ್ದ 6 ದುಷ್ಕರ್ಮಿಗಳ ತಂಡ ಸಹದೇವ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಕ್ಷಣಾರ್ಧದಲ್ಲಿ ಬೈಕ್‌ನಲ್ಲಿ ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಪುಟ್ಟೇನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.