ಮಂಗಳೂರು: ಮಾರ್ಬಲ್ ತುಂಬಿದ್ದ ಲಾರಿಯೊಂದು ಪಲ್ಟಿಯಾಗಿ ನಾಲ್ವರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ನಡೆದಿದೆ.
ಲಾರಿ ಪಲ್ಟಿಯಾಗಿ ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರಗೊಂಡಿದ್ದು, ಗಾಯಾಳುಗಳನ್ನು ಉತ್ತರ ಭಾರತದ ಮೂಲದವರು ಎಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ಆಂಬ್ಯುಲೆನ್ಸ್ ಗಳ ಮೂಲಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಾರ್ಬಲ್ ಅನ್ ಲೋಡ್ ಗಾಗಿ ಲಾರಿಯನ್ನು ರಿವರ್ಸ್ ತೆಗೆಯುವ ವೇಳೆ ಬ್ರೇಕ್ ಫೇಲ್ ಆಗಿ ಲಾರಿ ಪಲ್ಟಿಯಾಗಿ ನೀರಿನ ತೊಟ್ಟಿಗೆ ಬಿದ್ದು ಲಾರಿಯಲ್ಲಿದ್ದ ಕಾರ್ಮಿಕರಿಗೆ ಗಂಭೀರ ಗಾಯವಾಗಿದೆ.










