ಮಾವೋವಾದಿಗಳಿಂದ ಬಾಂಬ್ ದಾಳಿ- 11 ಯೋಧರು ಹುತಾತ್ಮ…

55
firstsuddi

ಛತ್ತೀಸ್‌ಗಢ: ಮಾವೋವಾದಿಗಳು ನಡೆಸಿದ ಬಾಂಬ್ ದಾಳಿಯಲ್ಲಿ 10 ಪೊಲೀಸ್ ಸಿಬ್ಬಂದಿ ಸೇರಿದಂತೆ 11 ಯೋಧರು ಹುತಾತ್ಮರಾದ ಘಟನೆ ಇಂದು ದಾಂತೇವಾಡದಲ್ಲಿ ನಡೆದಿದೆ.

ಗುಪ್ತಚರ ಮಾಹಿತಿಯ ಮೇರೆಗೆ ಪ್ರಾರಂಭವಾದ ನಕ್ಸಲ್ ವಿರೋಧಿ ಕಾರ್ಯಾಚರಣೆಯಿಂದ ಪೊಲೀಸರು ಹಿಂತಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಯೋಧರು ಸಂಚರಿಸುತ್ತಿದ್ದ ವಾಹನವನ್ನು ನಕ್ಸಲರು ಐಇಡಿಯಿಂದ ದಾಳಿ ನಡೆಸಿ ಸ್ಫೋಟಿಸಿದ್ದಾರೆ. ಇದರ ಪರಿಣಾಮವಾಗಿ 10 ಭದ್ರತಾ ಸಿಬ್ಬಂದಿ ಮತ್ತು ಚಾಲಕ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿ ಸ್ಥಳಕ್ಕೆ ನಕ್ಸಲ್ ನಿಗ್ರಹ ದಳ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ಘಟನೆ ಕುರಿತು ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಪ್ರತಿಕ್ರಿಯಿಸಿ, ಹುತಾತ್ಮ ಯೋಧರಿಗೆ ಸಂತಾಪ ಸೂಚಿಸಿದ ಅವರು, ನಕ್ಸಲರು ನಡೆಸಿದ ದಾಳಿಯ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಹೋರಾಟವು ಕೊನೆಯ ಹಂತದಲ್ಲಿದೆ. ದಾಳಿಯಲ್ಲಿ ಭಾಗಿಯಾಗಿರುವ ನಕ್ಸಲರನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ನಕ್ಸಲರೆಂದು ಕರೆಯಲ್ಪಡುವ ಮಾವೋವಾದಿಗಳು ಆರು ದಶಕಗಳಿಂದ ನೂರಾರು ಜನರನ್ನು ಹತ್ಯೆಗೈದು ಸರ್ಕಾರದ ವಿರುದ್ಧ ಸಶಸ್ತ್ರ ಬಂಡಾಯವನ್ನು ನಡೆಸುತ್ತಿದ್ದಾರೆ.