ಮಿಂಚಿ ಹೋದ ಕಾರ್ಯಕ್ಕೆ ಚಿಂತಿಸಿ ಫಲ ಇಲ್ಲ : ಸಿದ್ದರಾಮಯ್ಯ…

3395
firstsuddi

ಬೆಂಗಳೂರು : ಜೆಡಿಎಸ್ ಪಕ್ಷದವರು ಬಿಜೆಪಿಗೆ ಮತ ಹಾಕಿದ್ದಾರೆ ಎಂಬ ಸಚಿವ ಜಿ.ಟಿ. ದೇವೇಗೌಡ ಅವರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದು, ಸಚಿವ ಜಿ.ಟಿ.ದೇವೇಗೌಡರ ಹೇಳಿಕೆ ನನ್ನಲ್ಲಿಯೂ ಅಚ್ಚರಿ ಮೂಡಿಸಿದೆ. ದೇವೇಗೌಡರ ಮಾತುಗಳು ಸುಳ್ಳಾಗಲಿ ಎಂದು ಆಶಿಸುತ್ತೇನೆ, ಮೇ ೨೩ರ ಫಲಿತಾಂಶದಲ್ಲಿ ಈ ಹೇಳಿಕೆಯ ಸತ್ಯಾಸತ್ಯತೆ ಗೊತ್ತಾಗಲಿದೆ. ಮಿಂಚಿ ಹೋದ ಕಾರ್ಯಕ್ಕೆ ಚಿಂತಿಸಿ ಫಲ ಇಲ್ಲ. ಕಾದು ನೋಡೋಣ ಎಂದು ಟ್ವೀಟ್ ಮಾಡಿದ್ದಾರೆ.