ಮಿಜೋರಾಂನಲ್ಲಿ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿದು 17 ಮಂದಿ ಸಾವು…

130
firstsuddi

ಐಶ್ವಾಲ್(ಮಿಜೋರಾಂ): ಮಿಜೋರಾಂನಲ್ಲಿ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿದು 17 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಭೀಕರ ಘಟನೆ ನಡೆದಿದೆ.

ರಾಜಧಾನಿ ಐಶ್ವಾಲ್‍ನಿಂದ ಸುಮಾರು 21ಕಿ.ಮೀ ದೂರದಲ್ಲಿರುವ ಸೈರಾಂಗ್‍ನಲ್ಲಿ ಇಂದು ಬೆಳಗ್ಗೆ ಈ ದುರಂತ ಸಂಭವಿಸಿದೆ.
ಘಟನೆಯ ವೇಳೆ 35-40 ಕಾರ್ಮಿಕರು ಸ್ಥಳದಲ್ಲಿ ಕಾರ್ಯನಿರತರಾಗಿದ್ದರು. ಈ ವೇಳೆ ಏಕಾಏಕಿ ನಿರ್ಮಾಣ ಹಂತದ ಸೇತುವೆ ಕುಸಿದು ಬಿದ್ದಿದೆ. ಅದರಡಿ ಕಾರ್ಮಿಕರು ಸಿಲುಕಿದ್ದು, ಸದ್ಯ 17 ಮಂದಿ ಸಾವನ್ನಪ್ಪಿದ ಬಗ್ಗೆ ಮಾಹಿತಿ ಸಿಕ್ಕಿದೆ. ಅವಶೇಷಗಳಡಿ ಇನ್ನಷ್ಟು ಜನ ಸಿಲುಕಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ದುರಂತದ ಬಗ್ಗೆ ಮಾಹಿತಿ ಪಡೆದಿರುವ ಮಿಜೋರಾಂ ಮುಖ್ಯಮಂತ್ರಿ ಝೋರಂತಂಗ ಅವರು ಸಂತಾಪ ಸೂಚಿಸಿದ್ದು, ಐಜ್ವಾಲ್ ಬಳಿಯ ಸೈರಾಂಗ್‍ನಲ್ಲಿ ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಮೇಲ್ಸೇತುವೆ ಇಂದು ಕುಸಿದಿದೆ, ಕನಿಷ್ಠ 15 ಕಾರ್ಮಿಕರು ಮೃತಪಟ್ಟಿದ್ದಾರೆ, ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ. ಈ ದುರಂತದಿಂದ ತೀವ್ರವಾಗಿ ದುಃಖಿತನಾಗಿದ್ದೇನೆ, ಕುಟುಂಬ ಸದಸ್ಯರನ್ನು ಕಳೆದುಕೊಂಡ ಎಲ್ಲರಿಗೂ ನೋವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50 ಸಾವಿರ ರೂ. ನೀಡುವುದಾಗಿ ಘೋಷಿಸಿದ್ದಾರೆ.