ಮಿರ್ಚಿ, ಬಜ್ಜಿ ಕೊಡಿಸುವುದಾಗಿ ಪುಸಲಾಯಿಸಿ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ 70ರ ವೃದ್ಧ..!

68
firstsuddi

ಕಲಬುರಗಿ : ಮಿರ್ಚಿ, ಬಜ್ಜಿ ಕೊಡಿಸುವುದಾಗಿ ನಂಬಿಸಿ 13 ವರ್ಷದ ಬಾಲಕಿ ಮೇಲೆ 70 ವರ್ಷದ ವೃದ್ಧ ಅತ್ಯಾಚಾರವೆಸಗಿರುವ ಘಟನೆ ಅಫಜಲಪುರ ತಾಲೂಕಿನ ರೇವೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ನವೆಂಬರ್ 29 ರಂದು ಅತ್ಯಾಚಾರ ನಡೆದಿದೆ ಎನ್ನಲಾಗಿದೆ.

ನಿನ್ನೆ ರೇವೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಬಾಲಕಿಯನ್ನು ಅಫಜಲಪುರ ತಾಲೂಕು ಆಸ್ಪತ್ರೆಗೆ ಕರೆ ತಂದು ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆ.

ಮಿರ್ಚಿ, ಬಜ್ಜಿ ಕೊಡಿಸುವುದಾಗಿ ಬಾಲಕಿಯನ್ನು ಪುಸಲಾಯಿಸಿ, ಈ ಕೃತ್ಯ ಎಸಗಲಾಗಿದೆ ಎಂದು ಪೋಷಕರು ಪ್ರಕರಣ ದಾಖಲಿಸಿದ್ದಾರೆ. ಈ ಕುರಿತು ಪೋಕ್ಸೊ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.