ಮೀಟರ್ ಬಡ್ಡಿಗೆ ಬೇಸತ್ತು ಮಹಿಳೆ ಆತ್ಮಹತ್ಯೆ…

78
firstsuddi

ಕೋಲಾರ : ಮೀಟರ್ ಬಡ್ಡಿಗೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಅತ್ತಗಿರಿಕೊಪ್ಪ ಗ್ರಾಮದಲ್ಲಿ ನಡೆದಿದೆ.

ಲಕ್ಷ್ಮಿದೇವಮ್ಮ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮೃತ ಲಕ್ಷ್ಮೀದೇವಮ್ಮ ಹುಲಿಬೆಲೆ ಗ್ರಾಮದ ವೀಣಾ ವೆಂಕಟೇಶ್ ಮತ್ತಿತರರ ಬಳಿ ಸಾಲ ಪಡೆದಿದ್ದರು. ಬಡ್ಡಿ ಹಣಕ್ಕಾಗಿ ಸತಾಯಿಸಿ ಮಾನಸಿಕ ಹಿಂಸೆ ನೀಡುತ್ತಿದ್ದ ಹಿನ್ನೆಲೆ ಲಕ್ಷ್ಮಿದೇವಮ್ಮ ನಿದ್ರೆ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಹೀಗಾಗಿ ತಕ್ಷಣ ಅವರನ್ನು ಕೋಲಾರದ ಆರ್.ಎಲ್ ಜಾಲಪ್ಪ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆದ್ರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ.

ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಬಡ್ಡಿ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದ ಬಗ್ಗೆ ವೀಡಿಯೋ ಮಾಡಿದ್ದಾರೆ. ಸದ್ಯ ಘಟನೆ ಸಂಬಂಧ ಬೂದಿಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ವಿಡಿಯೋ ಆಧಾರದ ಮೇಲೆ ವೀಣಾ ವೆಂಕಟೇಶ್, ಅರುಣ್, ಲಕ್ಷ್ಮಿ ವಿರುದ್ಧ ಪ್ರಕರಣ ದಾಖಲಾಗಿದೆ.