ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆಗೆ ರಾಜ್ಯಪಾಲರಿಂದ ಅಂಕಿತ.. ಮುಂದಿನ ಅಧಿವೇಶನದಲ್ಲಿ ಅನುಮೋದನೆ ಪಡೆಯಲಾಗುವುದು ಎಂದ ಸಿಎಂ

50
firstsuddi

ಹುಬ್ಬಳ್ಳಿ : ಎಸ್​ಸಿ ಮತ್ತು ಎಸ್​ಟಿ ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ನಿನ್ನೆ ಅಂಕಿತ ಹಾಕಿದ್ದಾರೆ. ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿರುವ ಬಗ್ಗೆ ನಗರದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಸುಗ್ರೀವಾಜ್ಞೆಗೆ ಮುಂದಿನ ಅಧಿವೇಶನದಲ್ಲಿ ಎರಡೂ ಸದನಗಳಿಂದ ಅನುಮೋದನೆ ಪಡೆಯಲಾಗುವುದು ಎಂದು ತಿಳಿಸಿದರು.

ಈ ವರ್ಗಗಳಿಗೆ ಕಾನೂನಿನ ರಕ್ಷಣೆ ನೀಡಲಾಗುತ್ತಿದೆ. ಹಿಂದುಳಿದ ವರ್ಗಗಳ ಮೀಸಲಾತಿ ಬಗ್ಗೆ ಆಯೋಗಗಳ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು. ಯಾವುದೇ ವರ್ಗದ ಮೀಸಲಾತಿ ತೆಗೆಯುವುದಾಗಲಿ, ಸೇರ್ಪಡೆ ಮಾಡುವುದರ ಬಗ್ಗೆಯಾಗಲೀ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ. ಏನೇ ಮಾಡಿದರೂ ಸಂವಿಧಾನ ಹಾಗೂ ಕಾನೂನಿನ ಚೌಕಟ್ಟಿನಲ್ಲಿಯೇ ಮಾಡಬೇಕು. ಮೀಸಲಾತಿ ಅತ್ಯಂತ ಸೂಕ್ಷ್ಮವಾದ ವಿಚಾರವಾಗಿದ್ದು, ಸರ್ಕಾರದ ಮುಖ್ಯಸ್ಥನಾಗಿ ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನಲ್ಲಿ ಮುಂದುವರಿಯಬೇಕು ಎಂದು ಹೇಳಿದರು.