ನವದೆಹಲಿ : ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭಗೊಂಡಿದ್ದು, ಈ ಹಿಂದೆ ನಡೆದ ಅಧಿವೇಶನದಲ್ಲಿ ಅಶಿಸ್ತು ತೋರಿದ್ದಕ್ಕೆ ರಾಜ್ಯಸಭೆಯ 12 ವಿಪಕ್ಷ ಸಂಸದರು ಪ್ರಸಕ್ತ ಅಧಿವೇಶನದಿಂದ ಅಮಾನತುಗೊಳಿಸಲಾಗಿದೆ.
ಮುಂಗಾರು ಅಧಿವೇಶನದ ಕೊನೆಯ ದಿನದಂದು ಮೇಲ್ಮನೆಯಲ್ಲಿ ಗದ್ದಲ ಸೃಷ್ಟಿಸಿ ಅಶಿಸ್ತು ತೋರಿದ್ದಕ್ಕೆ ಅವರ ವಿರುದ್ಧ ಶಿಸ್ತು ಕ್ರಮವನ್ನು ಕೈಗೊಳ್ಳಲಾಗಿದೆ.
ಎಳಮರಮ್ ಕರೀಂ. ಫುಲೋ ದೇವಿ ನೇತಮ್, ಛಾಯಾ ವರ್ಮಾ,ರಿಪುನ್ ಬೋರಾ, ಬಿನೋಯ್ ವಿಶ್ವಂ, ರಾಜಮಣಿ ಪಟೇಲ್,ಡೋಲಾ ಸೇನ್, ಶಾಂತಾ ಛೆಟ್ರಿ, ಪ್ರಿಯಾಂಕಾ ಚತುರ್ವೇದಿ, ಸೈಯದ್ ನಾಸಿರ್ ಹುಸೇನ್, ಅನಿಲ್ ದೇಸಾಯಿ, ಅಖಿಲೇಶ್ ಪ್ರಸಾದ್ ಸಿಂಗ್ ಅಮಾನತುಗೊಂಡಿದ್ದಾರೆ.
ಆಗಸ್ಟ್ 11 ರಂದು ನಡೆದ ಸಂಸತ್ ಅಧಿವೇಶನದ ವೇಳೆ ಪೆಗಾಸಸ್, ಕೃಷಿ ಕಾಯ್ದೆ ಮಸೂದೆ ಸೇರಿದಂತೆ ವಿವಿಧ ವಿಷಯಗಳನ್ನಿಟ್ಟುಕೊಂಡು ನಿರಂತರವಾಗಿ ಸದನಕ್ಕೆ ಅಡ್ಡಿಪಡಿಸಲಾಗುತ್ತಿತ್ತು. ಅಲ್ಲದೇ ರಾಜ್ಯಸಭೆಯಲ್ಲಿ ನಿಯಮ ದುರುಪಯೋಗ ಹಾಗೂ ಅಶಿಸ್ತಿನಿಂದ ನಡೆದುಕೊಂಡಿರುವ ಕಾರಣ ಸದಸ್ಯರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.










