ಮುಂದಿನ ಚುನಾವಣೆಯಲ್ಲಿ ಬಿಎಸ್​​ವೈ ಬಲ, ಮಾರ್ಗದರ್ಶನ ಇರಲಿದೆ : ಬೊಮ್ಮಾಯಿ.

53
firstsuddi

ನವದೆಹಲಿ : ಮುಂದಿನ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಬಲ, ಮಾರ್ಗದರ್ಶನ ಇರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ರಾಜ್ಯಕ್ಕೆ ವಾಪಸ್ ಆದ ಬಳಿಕ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ. ಬಿಎಸ್​​ವೈ ಅವರಿಗೆ ಸುಸ್ತಾಗಲಿ, ನಿವೃತ್ತಿಯಾಗಲಿ ಇಲ್ಲ. ಅವರು ನಿರಂತರ ಹೋರಾಟಗಾರರು. ಅವರು ಭಾರತೀಯ ಜನತಾ ಪಾರ್ಟಿಯೊಂದಿಗೆ ಸದಾ ಇರುತ್ತಾರೆ. ಅವರಿಗೆ ತಮ್ಮದೇ ಆದ ಮಹತ್ವವಿದ್ದು, ಪಕ್ಷದ ವರಿಷ್ಠರಿಗೂ ಅವರ ಮಹತ್ವದ ಅರಿವಿದೆ. ಕಳೆದ ಬಾರಿ ಅವರನ್ನು ಭೇಟಿ ಮಾಡಿದ್ದ ಸಂದರ್ಭದಲ್ಲಿ ಈ ಬಗ್ಗೆ ಏನೂ ಚರ್ಚಿಸಿಲ್ಲ. ಮುಂದಿನ ಬಾರಿ ಭೇಟಿಯಾದಾಗ ಚರ್ಚಿಸಲಾಗುವುದು ಎಂದರು.

ದೆಹಲಿ ಭೇಟಿ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ, ಈ ಬಾರಿಯ ಭೇಟಿ ರಾಷ್ಟ್ರಪತಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸುವುದಕ್ಕೆ ಸೀಮಿತವಾಗಿದೆ. ಜು.25 ರಂದು ದ್ರೌಪದಿ ಮುರ್ಮು ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ಆ ಕಾರ್ಯಕ್ರಮಕ್ಕೆ ಆಗಮಿಸುತ್ತೇನೆ. ಆಗ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತೇನೆ ಎಂದು ಹೇಳಿದರು.