ಮುಂದಿನ ಸಿಎಂ ಪಟ್ಟಕ್ಕಾಗಿ ಕಾಂಗ್ರೆಸ್ ನವರು ಗುದ್ದಾಟ ನಡೆಸುತ್ತಿದ್ದಾರೆ : ಜಗದೀಶ್ ಶೆಟ್ಟರ್.

74
firstsuddi

ಬೆಂಗಳೂರು : ಕಾಂಗ್ರೆಸ್ ನಲ್ಲಿ ಸಿಎಂ ಬಗೆಗಿನ ಚರ್ಚೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಸಚಿವ ಜಗದೀಶ್ ಶಟ್ಟರ್ ಅವರು ನಮ್ಮ ಬಗ್ಗೆ ಸಿದ್ದರಾಮಯ್ಯ, ಡಿಕೆಶಿ ಟೀಕೆ ಮಾಡತ್ತಾ ಇರ್ತಾರೆ. ಆದರೆ ಅವರೇ ಈಗ ಮುಂದಿನ ಸಿಎಂ ಪಟ್ಟಕ್ಕಾಗಿ ಗುದ್ದಾಟ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಈಗ ಬಹುಮತದಲ್ಲಿ ಇಲ್ಲ. ಡಿಕೆಶಿ, ಸಿದ್ದರಾಮಯ್ಯ ನಾವೆಲ್ಲ ಒಂದಾಗಿದ್ದೇವೆ ಎಂದು ಹೇಳಿದ್ದರು. ಆದರೆ ಆದರೆ ಈಗ ಅವರೇ ಈಗ ಮುಂದಿನ ಸಿಎಂ ಯಾರು? ಅಂತಾ ಕಿತ್ತಾಡುತ್ತಿದ್ದಾರೆ. ಕಾಂಗ್ರೆಸ್ ನ ಅಧಿಕಾರ ದಾಹ ಎಷ್ಟಿದೆ ಎನ್ನುವುದು ಇದರಿಂದ ಗೊತ್ತಾಗುತ್ತದೆ. ಬಹುಶಃ ಈ ಕಾಂಗ್ರೆಸ್ ನ ಹಣೆಬರಹವೇ ಇಷ್ಟು. ಸಿದ್ದರಾಮಯ್ಯ ಪ್ರತಿಪಕ್ಷ ನಾಯಕರಾಗಿ ಜನಪರ ಕಾಳಜಿ ಮಾಡಬೇಕಿದೆ. ಆದರೆ ಇವರು ರಾಜಕೀಯವನ್ನಷ್ಟೇ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಇದೇ ವೇಳೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುತ್ತಾರೆಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ವಿಚಾರ ನನಗೆ ಗೊತ್ತಿಲ್ಲ ಎಂದರು.