ಮುಂಬೈ ದೋಣಿ ದುರಂತ: ಪ್ರಧಾನಿ ಮೋದಿ ತೀವ್ರ ಸಂತಾಪ.

26

ನವದೆಹಲಿ: ಗೇಟ್‍ವೇ ಆಫ್ ಇಂಡಿಯಾ ಬಳಿ ಪ್ರಯಾಣಿಕರಿದ್ದ ದೋಣಿಗೆ ಸ್ಪೀಡ್‍ಬೋಟ್ ಡಿಕ್ಕಿ ಹೊಡೆದು 13 ಮಂದಿ ಪ್ರಯಾಣಿಕರು ಮೃತಪಟ್ಟ ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ದುರ್ಘಟನೆ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೆÇೀಸ್ಟ್ ಮಾಡಿರುವ ಅವರು, ಮುಂಬೈನಲ್ಲಿ ದೋಣಿ ಅಪಘಾತದಲ್ಲಿ ಸಾವನ್ನಪ್ಪಿದ ಪ್ರತಿಯೊಬ್ಬರ ಕುಟುಂಬಕ್ಕೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿಗಳ ಪರಿಹಾರವನ್ನು ಪ್ರಧಾನಿ ಹೇಳಿದರು. ಗಾಯಗೊಂಡವರಿಗೆ 50,000 ರೂಪಾಯಿಗಳನ್ನು ನೀಡುವುದಾಗಿ ಹೇಳಿದ್ದಾರೆ. ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರು ಸಿಎಂ ದೇವೇಂದ್ರ ಫಡ್ನವೀಸ್ ಅವರು, ‘ಮುಂಬಯಿ ಬಳಿ ಬುಚರ್ ಐಲ್ಯಾಂಡ್‍ನಲ್ಲಿ ಮಧ್ಯಾಹ್ನ 3.55ರ ವೇಳೆಗೆ ನೌಕಾಪಡೆಯ ಬೋಟ್ ‘ನೀಲ್‍ಕಮಲ್’ ಹೆಸರಿನ ದೋಣಿಗೆ ಡಿಕ್ಕಿ ಹೊಡದು ಅವಘಡ ಸಂಭವಿಸಿದೆ. ಸಂಜೆ 7.30ರ ಮಾಹಿತಿ ಪ್ರಕಾರ 101 ಜನರನ್ನು ಸುರಕ್ಷಿತವಾಗಿ ಕಾಪಾಡಲಾಗಿದೆ. 10 ಮಂದಿ ಪ್ರಯಾಣಿಕರು ಹಾಗೂ 3 ಮಂದಿ ನೌಕಾಪಡೆಯ ಸಿಬ್ಬಂದಿ ಸೇರಿ ಒಟ್ಟು ದುರಂತದಲ್ಲಿ 13 ಜನರು ನಿಧನರಾಗಿದ್ದಾರೆ. ಶೋಧಕಾರ್ಯ ಮುಂದುವರಿದಿದೆ. ನಾಪತ್ತೆಯಾದವರ ಹೆಚ್ಚಿನ ವಿವರ ನಾಳೆ ಬೆಳಗ್ಗೆ ಲಭ್ಯವಾಗಲಿದೆ’ ಎಂದು ಮಾಹಿತಿ ಲಭ್ಯವಾಗಿದೆ. ಅಲ್ಲದೆ ಮೃತರ ಕುಟುಂಬಗಳಿಗೆ ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ರೂ. ನೀಡುವುದಾಗಿ ಘೋಷಣೆ ಮಾಡಿದ್ದಾರೆ.