ಮುಂಬೈನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಒಂದೇ ಕುಟುಂಬದ ಮೂವರು ಸಾವು.

33

ಮುಂಬೈ: ಮುಂಬೈನ ಜಾವ್ಲೆ ಎಂಬ ಗ್ರಾಮದಲ್ಲಿನ ಕಿರಾಣಿ ಅಂಗಡಿಯಲ್ಲಿ 5 ಕೆಜಿ ತೂಕದ ಎರಡು ಸಿಲಿಂಡರ್‍ಗಳು ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಸಿಲಿಂಡರ್ ಸ್ಫೋಟದ ತೀವ್ರತೆ ಭೀಕರವಾಗಿತ್ತು. ಈ ಘಟನೆಯಿಂದ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ. 38 ವರ್ಷದ ತಾಯಿ, 15 ವರ್ಷದ ಮಗಳು ಮತ್ತು 8 ವರ್ಷದ ಮಗ ಇದ್ದಾರೆ. ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಈ ಅಂಗಡಿಯಲ್ಲಿ ಸಣ್ಣ ಸಿಲಿಂಡರ್‍ಗಳನ್ನು ಮಾರಾಟಕ್ಕೆ ಇಡಲಾಗಿತ್ತು. ಅಲ್ಲದೇ ರಹಸ್ಯವಾಗಿ ಪೆಟ್ರೋಲ್ ಕೂಡ ಮಾರಾಟ ಮಾಡಲಾಗುತ್ತಿತ್ತು ಎಂಬ ಮಾಹಿತಿ ಇದೆ. ಮುಂಜಾಗ್ರತಾ ಕ್ರಮವಾಗಿ ಸುತ್ತಮುತ್ತಲಿನ ಮನೆಗಳನ್ನು ತೆರವು ಮಾಡಲಾಗಿತ್ತು. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದಾರೆ. ಸಿಲಿಂಡರ್ ಸ್ಫೋಟಕ್ಕೆ ಸದ್ಯಕ್ಕೆ ಕಾರಣ ತಿಳಿದು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.